ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಇದೀಗ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ವೇಳೆ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಅಗತ್ಯ ಬಿದ್ದರೆ ಅವರನ್ನು ಬಂಧಿಸಲೂ ಸಹ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಆದರೆ ಬಲವಂತದ ದಾಳಿಗೆ ನ್ಯಾಯಾಲಯದ ತಡೆಯಾಜ್ಞೆ ಇದೆ ಎನ್ನಲಾಗಿದ್ದು, ಹೀಗಾಗಿ ಡಿಕೆಶಿ ಪರ ವಕೀಲರು ಸಿಬಿಐ ದಾಳಿ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲು ಏರುವ ಸಾಧ್ಯತೆ ಇದೆ.