ಬೆಂಗಳೂರು: ಸಿಡಿ ಲೇಡಿ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಿಡಿ ಕೇಸ್ ನಲ್ಲಿ ಡಿ.ಕೆ. ಶಿವಕುಮಾರ್ ಆರಂಭದಲ್ಲಿ ಹೆಗಲು ಮುಟ್ಟಿಕೊಂಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದರು. ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎಂದಿದ್ದಾರೆ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ಇವರ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ. ಪ್ರಕರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ. ಪಕ್ಷಕ್ಕೆ ಬದ್ಧತೆ ಇದ್ದರೆ ಮೊದಲು ಮಹಾನಾಯಕನ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ಒತ್ತಾಯಿಸಿದೆ.
ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದ ಪೋಷಕರು; ವಕೀಲರ ಭೇಟಿಗೆ ನಿರಾಕರಿಸಿದ ಪೊಲೀಸರು
ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ ಬಗ್ಗೆ ಮಾತನಾಡುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಗ ಸಿಡಿ ಷಡ್ಯಂತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಏಕೆ ಮೌನವಾಗಿದ್ದೀರಿ? ಯಾವ ಸೆಕ್ಷನ್ ಪ್ರಕಾರ ಇದು ಅಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.