
ಈ ಮೊದಲು ಮಾಡಿದ ಪರೀಕ್ಷೆಯಲ್ಲಿ ಸಿ.ಟಿ. ರವಿಯವರಿಗೆ ಕೊರೊನಾ ನೆಗೆಟಿವ್ ಎಂದು ವರದಿ ಬಂದಿತ್ತು. ಮತ್ತೊಮ್ಮೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಕಂಡು ಬಂದಿದ್ದು, ಹೀಗಾಗಿ ಮೂರನೇ ಬಾರಿ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು.
ಈ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಸಚಿವರು, ಒಂದು ವಾರದೊಳಗಿನ ಎರಡು ಟೆಸ್ಟ್ ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ, ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ ಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದ್ದರು.
ಇದೀಗ ಅದರ ಫಲಿತಾಂಶ ಹೊರ ಬಿದ್ದಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ. ರವಿ, “ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು, ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.