ನವದೆಹಲಿ: ದೇಶಾದ್ಯಂತ ಕೊರೊನ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ದೇಶಾದ್ಯಂತ 3006 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು, ಕೊ-ವಿನ್ ಆಪ್ ಗೆ ಕೂಡ ಇದೇ ವೇಳೆ ಚಾಲನೆ ನೀಡಿದರು. ಈ ಮೂಲಕ ದೇಶದ 3006 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೂಡ ಕರೋನಾ ಲಸಿಕೆ ನೀಡಲಾಗುತ್ತಿದ್ದು, ಮೊದಲು ಪೌರ ಕಾರ್ಮಿಕರಿಗೆ ಲಸಿಕೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿ 243 ಕೇಂದ್ರಗಳಲ್ಲಿ 24,300 ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ.
ಪ್ರತಿ ಕೇಂದ್ರದಲ್ಲಿ ಮೊದಲಿಗೆ 100 ಜನರಿಗೆ ವೈದ್ಯರು ಲಸಿಕೆ ಹಾಕಲಿದ್ದು, 30 ನಿಮಿಷಗಳವರೆಗೆ ಲಸಿಕೆ ಪಡೆದವರ ಮೇಲೆ ನಿಗಾ ವಹಿಸಲಾಗುತ್ತಿದೆ. ಬೆಂಗಳೂರಿನ ಮಲ್ಲಸಂದ್ರ ಸರ್ಕಾರಿ ಆಸ್ಪತ್ರೆಯ ವೈದ್ಯ ಕೋಮಲ ಈ ದಿನ ಮೊದಲು ಲಸಿಕೆ ಪಡೆದ ವೈದ್ಯರಾಗಿದ್ದಾರೆ.