ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಧ್ಯದಲ್ಲೆ ಮಹತ್ವದ ಬದಲಾವಣೆಗಳು ಆಗಲಿದೆಯೇ ಎಂಬ ಕುತೂಹಲ ಮೂಡಿದೆ. ತನ್ನ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ಹೈಕಮಾಂಡ್ ಬಳಿ ಲಾಬಿ ನಡೆಸಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದೀಗ ಸ್ವತ: ತಾವೇ ಡಿಸಿಎಂ ಹುದ್ದೆಯ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದಂತಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಎಲ್ಲರಿಗೂ ದೊಡ್ಡ ಹುದ್ದೆಗೆ ಹೋಗಬೇಕು ಎಂಬ ಆಸೆಯಿರುತ್ತೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ನಾನು ಎಲ್ಲಿಯೂ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿಲ್ಲ. ನನಗೆ ಡಿಸಿಎಂ ಹುದ್ದೆ ನೀಡುವುದು ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಿದರು.
ಇದೇ ವೇಳೆ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ತಿರುಗೇಟು ನೀಡಿದ ಜಾರಕಿಹೊಳಿ, ರಾಜೀನಾಮೆ ನೀಡುವ ಟೈಂ ಬಂದರೆ ನೋಡೋಣ. ಆದರೆ ತ್ಯಾಗ ಮಾಡಿ ಬಂದ 17 ಜನರಿಗೂ ಸ್ಥಾನ ಸಿಗಬೇಕು. ಸಿಎಂ ಕೊಟ್ಟ ಮಾತನ್ನು ತಪ್ಪಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.