ಬೆಂಗಳೂರು: ನನ್ನ ಸಾಧನೆ ಬಗ್ಗೆ ಮಾತನಾಡಲು ಈಶ್ವರಪ್ಪ ಯಾರು? ನಾನು ಸಿಎಂ ಆಗಿದ್ದಾಗ ಏನು ಅಭಿವೃದ್ಧಿ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಮಾಡಿದ ಸಾಧನೆಯೇನು ಎಂದು ಕಿಡಿಕಾರಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಆರ್.ಎಸ್.ಎಸ್.ನವರು ಈಶ್ವರಪ್ಪನವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ನನ್ನ ಸಾಧನೆ ಬಗ್ಗೆ ಕೇಳಲು ಈಶ್ವರಪ್ಪ ಯಾರು? ನನಗೆ ಈಶ್ವರಪ್ಪನವರ ಸರ್ಟಿಫಿಕೇಟ್ ಬೇಕಿಲ್ಲ. ನಾನು ಸಿಎಂ ಆಗಿದ್ದಾಗ ಯಾವೆಲ್ಲ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆ ಗೊತ್ತಿದೆ ಎಂದರು.
ಮತ್ತೆ ಅಹಿಂದ ಹೋರಾಟಕ್ಕೆ ಸಜ್ಜಾದ್ರಾ ವಿಪಕ್ಷ ನಾಯಕ ಸಿದ್ದರಾಮಯ್ಯ…?
ಇನ್ನು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ ಎಂಬ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆಯಿಲ್ಲ. ಜೆಡಿಎಸ್ ನವರು ಬಿಜೆಪಿಗೆ ಸಹಾಯ ಮಾಡಲು ಹೋಗಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಲಾಗುತ್ತದೆ ಎಂದು ಹೇಳಿದರು.