ಬೆಂಗಳೂರು: ನಾಳೆ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಇದೀಗ ಲಸಿಕೆ ಅಭಾವ ಆರಂಭವಾಗಿರುವುದರಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ನಾಳೆಯಿಂದ ಲಸಿಕೆ ನೀಡುವುದು ಅನುಮಾನ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಚಾರವಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಾಳೆ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಆಗಲ್ಲ ಕಾರಣ ಸಿರಮ್ ಇನ್ ಸ್ಟಿಟ್ಯೂಟ್ ನಿಂದ ಇನ್ನೂ ಲಸಿಕೆ ಬಂದಿಲ್ಲ. ಲಸಿಕೆ ಪೂರೈಕೆಯಾದ ಬಳಿಕ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ ನಂತರ ಲಸಿಕೆ ನೀಡಲಾಗುವುದು ಎಂದರು.
ಕೊರೊನಾ ಲಸಿಕೆ ತೆಗೆದುಕೊಂಡ ನಂತ್ರ ಈ ಲಕ್ಷಣ ಕಂಡು ಬಂದ್ರೆ ಏನರ್ಥ ಗೊತ್ತಾ…..?
ಹಾಗಾಗಿ ಕೊರೊನಾ ಲಸಿಕೆ ಪಡೆಯಲು ನಾಳೆಯಿಂದ 18-44 ವರ್ಷದವರೆಗಿನ ಯಾರೂ ಆಸ್ಪತ್ರೆ ಬಳಿ ಹೋಗುವುದು ಬೇಡ. 45 ವರ್ಷ ಮೇಲ್ಪಟ್ಟವರಿಗೆ ಯಥಾಸ್ಥಿತಿಯಲ್ಲಿ ಲಸಿಕೆ ನೀಡಿಕೆ ಮುಂದುವರೆಯಲಿದೆ ಎಂದು ಹೇಳಿದರು.