ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಸಂಜೆ 3:50ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ನಾಳೆ 3:30ಕ್ಕೆ ನೂತನ ಸಚಿವರಿಗೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನಾಳೆ 3:50ಕ್ಕೆ 7-8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಸಂಭಾವ್ಯ ಸಚಿವರ ಪಟ್ಟಿ:
ಮುನಿರತ್ನ, ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಸಿ.ಪಿ.ಯೊಗೇಶ್ವರ್, ಮುರುಗೇಶ್ ನಿರಾಣಿ, ಎಸ್.ಅಂಗಾರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ.
ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಲ್ಳುವ ಸಾಧ್ಯತೆಯಿದ್ದು, ಅಬಕಾರಿ ಸಚಿವ ಹೆಚ್.ನಾಗೇಶ್ ಅವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.