alex Certify BIG NEWS: ನೌಕರಿ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸಗಿದ ಸಚಿವ ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೌಕರಿ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸಗಿದ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಇದೀಗ ಬಿರುಗಾಳಿ ಎಬ್ಬಿಸಿದ್ದು, ಯುವತಿಗೆ ನೌಕರಿ ಕೊಡಿಸುವುದಾಗಿ ನಂಬಿಸಿ ಸಚಿವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಗ್ಗೆ ತನಿಖೆ ನಡೆಸುವಂತೆ ಕಮೀಷನರ್ ಗೆ ದೂರು ನೀಡಿದ್ದೇನೆ. ಸಂತ್ರಸ್ತ ಯುವತಿ ಬೆಂಗಳೂರಿನ ಆರ್.ಟಿ.ನಗರದವರಾಗಿದ್ದು, ಕೆಪಿಟಿಸಿಎಲ್ ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಸಚಿವರು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿ ಹಾಗೂ ಕುಟುಂಬದವರು ನೋವು ತೋಡಿಕೊಂಡಿದ್ದಾರೆ.

ಪ್ರಕರಣ ಬಹಿರಂಗವಾದರೆ ಪರಿಣಾಮ ಸರಿ ಇರುವುದಿಲ್ಲ ಎಂದು ಸಂತ್ರಸ್ತ ಯುವತಿ ಹಾಗೂ ಇಡೀ ಕುಟುಂಬದವರಿಗೆ ಬೆದರಿಕೆಯೊಡ್ಡಲಾಗಿದ್ದು, ಇಡೀ ಕುಟುಂಬ ಜೀವ ಭಯದಿಂದ ಬದುಕುತ್ತಿದೆ. ಈ ನಿಟ್ಟಿನಲ್ಲಿ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...