ಬೆಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದೆ.
ಇಂದು ವಿಧಾನ ಪರಿಷತ್ ಕಲಾಪದ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ. ಗಲಾಟೆಯ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ವಿರುದ್ಧವೂ ದೂರು ನೀಡಿದೆ. ಗಲಾಟೆಯ ಸಂಪೂರ್ಣ ಚಿತ್ರಣದ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ.
ಇನ್ನು ನಿಯೋಗದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್.ಅಶೋಕ್, ಮಾಧುಸ್ವಾಮಿ, ರಮೇಶ್ ಗೌಡ, ಬಸವರಾಜ್ ಹೊರಟ್ಟಿ, ಪುಟ್ಟಣ್ಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.