ಬೆಂಗಳೂರು: ಯಾವುದೇ ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂಬ ಸುದ್ದಿ ಹರಡಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬೇಸಿಗೆ ರಜೆ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೇ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಹೇಳಿದರು.
ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್ ಘೋಷಣೆ
ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈಗಗಾಲೇ 6 ತರಗತಿಯಿಂದ ಶಾಲೆಗಳು ಆರಂಭವಾಗಿದ್ದು, ಉಳಿದ ತರಗತಿ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದರು.