alex Certify BIG NEWS: ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳು ಪಾಸ್ ವಿಚಾರ – ಸುರೇಶ್ ಕುಮಾರ್ ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳು ಪಾಸ್ ವಿಚಾರ – ಸುರೇಶ್ ಕುಮಾರ್ ಹೇಳಿದ್ದೇನು….?

ಬೆಂಗಳೂರು: ಯಾವುದೇ ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂಬ ಸುದ್ದಿ ಹರಡಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬೇಸಿಗೆ ರಜೆ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೇ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಹೇಳಿದರು.

ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್ ಘೋಷಣೆ

ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈಗಗಾಲೇ 6 ತರಗತಿಯಿಂದ ಶಾಲೆಗಳು ಆರಂಭವಾಗಿದ್ದು, ಉಳಿದ ತರಗತಿ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...