ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಸರ್ಕಾರ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹತ್ತಿಕ್ಕಲು ಯತ್ನಿಸುತ್ತಿದೆ. ಹಲವು ಸಂಘಟನೆಗಳ ಬಸ್ ಗಳ ಓಡಾಟ ನಡೆಸಿದೆ. ಮುಷ್ಕರದಲ್ಲಿ ಪಾಲ್ಗೊಂಡ ನೌಕರರನ್ನು ವರ್ಗಾವಣೆ ಮಾಡಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ದಬ್ಬಾಳಿಕೆ ಹೇರುತ್ತಿದೆ. ಸರ್ಕಾರದ ಕ್ರಮದ ವಿರುದ್ಧ ನಾಳೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾರಿಗೆ ನೌಕರರು ತಟ್ಟೆ, ಲೋಟ ಬಡಿದು ವಿಭಿನ್ನ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು
ನಾಳೆ ಬೆಳಿಗ್ಗೆ 11 ಗಂಟೆಯಿಂದಲೇ ಚಳುವಳಿ ಆರಂಭಿಸುತ್ತೇವೆ. ಕೊರೊನಾ ನಿಯಮಗಳನ್ನು ಪಾಲಿಸಿಯೇ ವಿಭಿನ್ನ ಮುಷ್ಕರದಲ್ಲಿ ಭಾಗವಹಿಸುತ್ತೇವೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಪ್ರತಿಭಟನೆ ನಡೆಯಲಿದೆ ಎಂದರು.