alex Certify BIG NEWS: ಬಂಡೆಮಠದಶ್ರೀ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆಮಠದಶ್ರೀ ಆತ್ಮಹತ್ಯೆ ಪ್ರಕರಣ; ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರಾಮನಗರ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳಾದ ಕಣ್ಣೂರು ಮಠದ ಮೃತ್ಯುಂಜಯಶ್ರೀ, ಮಹದೇವ್ ಹಾಗೂ ನೀಲಾಂಬಿಕೆ ಮೂವರಿಗೆ ನ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬಂಡೆಮಠದ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳು ಬಸವಲಿಂಗಶ್ರೀಗಳ ವಿಡಿಯೋ ಮಾಡಿಟ್ಟುಕೊಂಡ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದರು. ನೀಲಾಂಬಿಕೆ ಸ್ವಾಮೀಜಿ ಜೊತೆ ಕಳೆದ ಎರಡು ವರ್ಷಗಳಿಂದ ಸಂಪರ್ಕದಲ್ಲಿದ್ದಳು. ತುಮಕೂರಿನಲ್ಲಿ ವಿಡಿಯೋ ಎಡಿಟ್ ಮಾಡಲಾಗಿತ್ತು. ಸ್ವಾಮೀಜಿಯ ಮರ್ಯಾದೆ ಕಳೆಯುವ ಉದ್ದೇಶದಿಂದ ಈ ಕೃತ್ಯವೆಸಗಿದ್ದಾಗಿ ಹೇಳಿದ್ದಾರೆ. ಆದರೆ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗುತ್ತಾರೆ ಎಂದುಕೊಂಡಿರಲಿಲ್ಲ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಮಾಗಡಿ ಪೊಲೀಸರು ತಿಳಿಸಿದ್ದಾರೆ.

ಇದೀಗ ಪ್ರಕರಣ ಸಂಬಂಧ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...