ಕಂಪ್ಲಿ: ನೂತನ ವಿಜಯನಗರ ಜಿಲ್ಲೆಯಿಂದ ಕಂಪ್ಲಿ ತಾಲೂಕನ್ನು ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕಂಪ್ಲಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಕಂಪ್ಲಿ ತಾಲೂಕು ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಾಲೂಕು ಬಂದ್ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಶಾಸಕ ಗಣೇಶ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ವೇಳೆ ಪರಸ್ಪರ ಕೈ ಕೈ ಮಿಲಾಸಿಕೊಳ್ಳುವ ಹಂತಕ್ಕೂ ತಲುಪಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಗಣೇಶ್, ಕಂಪ್ಲಿ ವಿಜಯನಗರದ ಹೆಬ್ಬಾಗಿಲು, ಇದೀಗ ಕಂಪ್ಲಿ ತಾಲೂಕನ್ನೇ ಕೈಬಿಟ್ಟು ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಿರುವುದು ರಾಜ್ಯ ಸರ್ಕಾರದ ಹಿಟ್ಲರ್ ಆಡಳಿತಕ್ಕೆ ಸಾಕ್ಷಿ. ರಾಜಕೀಯ ದುರುದ್ದೇಶದಿಂದ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ. ಸರ್ಕಾರ ಕಂಪ್ಲಿಯನ್ನು ವಿಜಯನಗರಕ್ಕೆ ಸೇರಿಸುವ ವರೆಗೂ ಹೋರಾಟ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.