ರಾಯಚೂರು: ರಾಜ್ಯದಲ್ಲಿ ಉಪಚುನಾವಣಾ ಅಖಾಡ ಕಾವೇರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಈ ನಡುವೆ ಬಿ.ವೈ.ವಿಜಯೇಂದ್ರ ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರದಾಡುತ್ತಿದ್ದು, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನಿಡಿದ್ದಾರೆ.
ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧಿಸುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಕೊಡುಗೆ: ಒಟ್ಟಿಗೆ 3 ಕಂತು ಸೇರಿ ಶೇ. 28 ಕ್ಕೆ ಡಿಎ ಹೆಚ್ಚಳ..?
ಬೈ ಎಲೆಕ್ಷನ್ ಮುಗಿದ ಬಳಿಕ ವಿಜಯೇಂದ್ರ ಮೈಸೂರಿನಲ್ಲಿ ಮನೆ ಮಾಡಲಿದ್ದಾರೆ. ಅಲ್ಲಿನ ಎರಡು ಮೂರು ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ. ಅಲ್ಲದೇ ಮುಂದಿನ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದ್ದು, ಈ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಇನ್ನು ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಶೀಘ್ರದಲ್ಲಿ ಅಭ್ಯರ್ಥಿ ಘೋಷಣೆ ಮಾಡಲಿದ್ದೇವೆ. ಅಭ್ಯರ್ಥಿ ಘೋಷಣೆಗೂ ಮೊದಲೇ ಬಿಜೆಪಿ ಈ ಕ್ಷೇತ್ರಗಳಲ್ಲಿ ಗೆದ್ದಾಗಿದೆ. ಇನ್ನು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲೂ ಗೆಲುವು ನಮ್ಮದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.