alex Certify BIG NEWS: ಬಿಜೆಪಿ ನಿಜಬಣ್ಣ ತಿಳಿಯಲು ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು; ಕಾಂಗ್ರೆಸ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಿಜಬಣ್ಣ ತಿಳಿಯಲು ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು; ಕಾಂಗ್ರೆಸ್ ವಾಗ್ದಾಳಿ

 

ಬೆಂಗಳೂರು: ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗದೆ ನೆಪಗಳನ್ನು ಹೇಳುತ್ತಿದ್ದು, ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕಾಂಗ್ರೆಸ್, ಪೊಲೀಸರೂ ಆರೋಪಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್‌ನ್ನು ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ, ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ ಅದಕ್ಕಾಗಿ ವಶಕ್ಕೆ ಪಡೆದಿಲ್ಲ ಎಂದು ವ್ಯಂಗ್ಯವಾಡಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು…..?

ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ. ಆರೋಪಿಯನ್ನು ಬಂಧಿಸದೇ, ತನಿಖೆಯನ್ನೂ ನಡೆಸದೆ ಆರೋಪಿಯದ್ದು ತಪ್ಪಿಲ್ಲ ಎಂದು ಸ್ವತಃ ಸಿಎಂ ಕ್ಲೀನ್ ಚಿಟ್ ನೀಡುತ್ತಾರೆ. ಮತ್ತೊಂದೆಡೆ ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...