ಮುಂಬೈ: ಕೊರೊನಾ ಮಹಾಮಾರಿ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿರುವ ಘಟನೆ ಥಾಣೆಯಲ್ಲಿ ನಡೆದಿದೆ.
ಕೊರೊನಾ ಸೋಂಕು ಗುಣಮುಖರಾದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಈ ಮಾರಣಾಂತಿಕ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದ್ದು, ಇದೀಗ ಮಹಾರಾಷ್ಟ್ರದ ಥಾಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ʼಶಾಕಿಂಗ್ʼ ಮಾಹಿತಿ ಬಹಿರಂಗ
ಥಾಣೆಯಲ್ಲಿ ಇನ್ನೂ 6 ಜನರಲ್ಲಿ ಬ್ಲ್ಯಾಕ್ ಫಂಗಸ್ ಇನ್ ಫೆಕ್ಷನ್ ಪತ್ತೆಯಾಗಿದ್ದು, ಅವರಲ್ಲಿ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಕೊರೊನಾ ಅಟ್ಟಹಾಸದ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಬಿಹಾರದಲ್ಲಿ 8 ಪ್ರಕರಣ ಪತ್ತೆಯಾಗಿದೆ. ಇದೀಗ ಮಹಾರಾಷ್ಟ್ರದಲ್ಲಿಯೂ ಈ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.