alex Certify BIG NEWS: ಬ್ಲಾಕ್ ಫಂಗಸ್ ಗೆ ಇಬ್ಬರು ಸೋಂಕಿತರು ಬಲಿ; ಮತ್ತಿಬ್ಬರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಲಾಕ್ ಫಂಗಸ್ ಗೆ ಇಬ್ಬರು ಸೋಂಕಿತರು ಬಲಿ; ಮತ್ತಿಬ್ಬರ ಸ್ಥಿತಿ ಗಂಭೀರ

ಮುಂಬೈ: ಕೊರೊನಾ ಮಹಾಮಾರಿ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿರುವ ಘಟನೆ ಥಾಣೆಯಲ್ಲಿ ನಡೆದಿದೆ.

ಕೊರೊನಾ ಸೋಂಕು ಗುಣಮುಖರಾದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಈ ಮಾರಣಾಂತಿಕ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದ್ದು, ಇದೀಗ ಮಹಾರಾಷ್ಟ್ರದ ಥಾಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ʼಶಾಕಿಂಗ್ʼ​ ಮಾಹಿತಿ ಬಹಿರಂಗ

ಥಾಣೆಯಲ್ಲಿ ಇನ್ನೂ 6 ಜನರಲ್ಲಿ ಬ್ಲ್ಯಾಕ್ ಫಂಗಸ್ ಇನ್ ಫೆಕ್ಷನ್ ಪತ್ತೆಯಾಗಿದ್ದು, ಅವರಲ್ಲಿ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು‌ ಬಂದಿದೆ.

ದೇಶದಲ್ಲಿ ಕೊರೊನಾ ಅಟ್ಟಹಾಸದ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಬಿಹಾರದಲ್ಲಿ 8 ಪ್ರಕರಣ ಪತ್ತೆಯಾಗಿದೆ. ಇದೀಗ ಮಹಾರಾಷ್ಟ್ರದಲ್ಲಿಯೂ ಈ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...