
ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,03,558 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 478 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,65,101 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 7,41,830 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,16,82,136 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 52,847 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 7,91,05,163 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.