alex Certify BIG NEWS: ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ ಪ್ರಭೇದ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ ಪ್ರಭೇದ ಪತ್ತೆ

ಕೋಲ್ಕತ್ತಾ: ದೇಶಾದ್ಯಂತ ಕೊರೊನಾ 2ನೇ ಅಲೆ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಭಾರತದಲ್ಲಿ ಕೊರೊನಾ ಸೋಂಕಿನ ಮತ್ತೊಂದು ಹೊಸ ಪ್ರಭೇದ ಪತ್ತೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಕೊರೊನಾದ ಹೊಸ ಪ್ರಭೇದ ಪತ್ತೆಯಾಗಿದ್ದು, ಬಿ.1.618 ಎಂದು ಈ ವೈರಸ್ ಗೆ ಹೆಸರಿಡಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ಹೊಸ ಪ್ರಭೇದ ಪತ್ತೆಯಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

ಕೊರೊನಾದಿಂದ ಪಾರಾಗೋಕೆ ಕಲಾವಿದನಿಂದ ಸಖತ್‌ ಪ್ಲಾನ್

ರೂಪಾಂತರ ಕೊರೊನಾ ವೈರಸ್ ನಿಂದ ತತ್ತರಿಸುತ್ತಿರುವ ಭಾರತದಲ್ಲಿ ಈಗ ಈ ಹೊಸ ವೈರಸ್ ಇನ್ನಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದ್ದು, ಇದು ರೂಪಾಂತರ ವೈರಸ್ ಗಿಂತಲೂ ವೇಗವಾಗಿ ಹರಡುತ್ತದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...