ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ಕೊರೊನಾ ಹಣವನ್ನೂ ಬಿಜೆಪಿ ಸರ್ಕಾರ ಲೂಟಿ ಮಾಡಿದೆ. ಈಗ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಅತ್ಯಂತ ಕಳಪೆ ಬಜೆಟ್. ರೈತರು, ಕಾರ್ಮಿಕರು, ಸರ್ಕಾರಿ ನೌಕರರು ಸೇರಿ ಎಲ್ಲಾ ವರ್ಗದ ಜನರಿಗೂ ಬಜೆಟ್ ನಿಂದ ತೊಂದರೆಯಾಗಲಿದೆ ಎಂದರು.
BIG NEWS: ರಸ್ತೆ ಮೇಲೆ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್ – ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿದ ಆತಂಕ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಗಗನ ಮುಖಿಯಾಗಿದೆ. ರೈತರು ಈಗಾಗಲೇ ನಡೆಸುತ್ತಿರುವ ಹೊರಾಟಕ್ಕೂ ಕೇಂದ್ರ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಈಗ ಎಲ್ಲಾ ವಸ್ತುಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಈ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಇಂದು ಸಂಜೆಯೊಳಗೆ ಹೋರಾಟದ ರೂಪುರೇಷೆ ಸಿದ್ಧಗೊಳಿಸುತ್ತೇವೆ ಎಂದು ಹೇಳಿದರು.