ಭ್ರಷ್ಟಾಚಾರ ಪ್ರಕರಣಗಳ ಕುರಿತಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಆರೋಪಿಗಳ ವಿರುದ್ಧ ದಾಖಲಿಸಿರುವ ಮತ್ತು ಮುಂದೆ ದಾಖಲಿಸಲಿರುವ ಆರೋಪ ಪಟ್ಟಿಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಇದರಿಂದಾಗಿ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸುವ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಇಲಾಖಾ ತನಿಖೆ ನಡೆಸಿ ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.
ಬೆಚ್ಚಿಬೀಳಿಸುವಂತಿದೆ ತೀವ್ರ ಸ್ವರೂಪದ ʼಕೊರೊನಾʼ ವೈರಾಣು ಪರಿಣಾಮ
ಲೋಕಾಯುಕ್ತಕ್ಕೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಚಿದಾನಂದ ಅರಸ್ ಎಂಬವರು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಪೂರಕವಾಗಿ ಲೋಕಾಯುಕ್ತ ಸಂಸ್ಥೆ ಸಹ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಇವುಗಳ ವಿಚಾರಣೆ ವೇಳೆ ಈ ಮಹತ್ವದ ಆದೇಶ ಹೊರಬಿದ್ದಿದೆ.