ಬೆಂಗಳೂರು: ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಶೀಲ್ ಪಾಂಡುರಂಗರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸುಶೀಲ್ ಪಾಂಡುರಂಗ ವಿರುದ್ಧ ವೈಯಕ್ತಿಕ ಹಾಗೂ ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಕೇಳಿಬಂದಿದೆ.
ಪಿಎಂಎಲ್ ಆಕ್ಟ್ ಅಡಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ಜಾರಿ ಮಾಡಿತ್ತು. ಇದೀಗ ವಿಚಾರಣೆಗೆ ಹಾಜರಾದ ಸುಶೀಲ್ ಪಾಂಡುರಂಗ ಅವರನ್ನು ಇಡಿ ವಶಕ್ಕೆ ಪಡೆದಿದೆ.