ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಎಲ್ಲಾ ಶಾಸಕರ ಮನೆಗಳ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಸಲು ಸಾದ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ ಪ್ರತಿಭಟನೆ ತೀವ್ರಗೊಳಿಸಿರುವ ನೌಕರರು, ಕಳೆದ ಮೂರು ದಿನಗಳಿಂಸ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಗುಡ್ ನ್ಯೂಸ್: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಮೊನ್ನೆ ತಟ್ಟೆ-ಲೋಟ ಬಡಿದು ಪ್ರತಿಭಟಿಸಿದ್ದರೆ, ಯುಗಾದಿ ಹಬ್ಬದ ದಿನ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದರು. ನಿನ್ನೆ ಕ್ಯಾಂಡಲ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಶಾಸಕರ ಮನೆ ಮುಂದೆ ಧರಣಿಗೆ ಮುಂದಾಗಿದ್ದಾರೆ. ಎಲ್ಲಾ ಶಾಸಕರಿಗೂ ಮನವಿ ಪತ್ರ ನೀಡುವ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಿದ್ದಾರೆ.