ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ವ್ಯಕ್ತವಾಗಿದ್ದು, ಇದೀಗ ಹೊಸದೊಂದು ಚರ್ಚೆಯನ್ನು ಹುಟ್ಟು ಹಾಕಿದೆ.
ನವೆಂಬರ್ 25ರಂದು ಕೋಲಾರದಲ್ಲಿ ಅಪಹರಣಕ್ಕೀಡಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್, ಐದಾರು ದಿನಗಳ ಕಾಲ ದೂರು ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ವರ್ತೂರು ಪ್ರಕಾಶ್ ಕಾರು ಚಾಲಕ ಕೂಡ ಯಾವುದೇ ದೂರು ದಾಖಲಿಸಿಲ್ಲ. ಇನ್ನೊಂದು ವಿಚಾರವೆಂದರೆ ಕೋಲಾರದಲ್ಲಿ ದೂರು ನೀಡದೇ ಬೆಂಗಳೂರಿನಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿರುವುದು ಕೂಡ ಹಲವು ಅನುಮಾನಕ್ಕೆ ಕಾರಣ ಎನ್ನಲಾಗಿದೆ.
ಅಲ್ಲದೇ ವರ್ತೂರು ಪ್ರಕಾಶ್ ಅವರನ್ನು ಅಪರಣ ಮಾಡಿರುವುದರ ಹಿಂದೆ ಮಹಿಳೆಯೊಬ್ಬರ ಕೈವಾಡವಿದ್ದು, ಮಾಜಿ ಸಚಿವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಾರೆ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆಯಾದ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬೀಳಲಿದೆ.