ಚಿತ್ರದುರ್ಗ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬೇಡಿಕೆ ಈಡೇರುವ ವರೆಗೂ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ವಾಮಿಜಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಪರ ನಿಯೋಗದಿಂದ ಸ್ವಾಮೀಜಿ ಮನವೊಲಿಕೆ ಯತ್ನ ನಡೆದಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮಿಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಬುರುಜನರೊಪ್ಪ ಗ್ರಾಮ ತಲುಪಿದೆ. ಮೀಸಲಾತಿ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಯಾವ ನಿಯೋಗ ಬಂದರೂ ಮೀಸಲಾತಿ ಪರ ಮಾತನಾಡಲಿ ಎಂದು ಸ್ವಾಮೀಜಿ ಪಟ್ಟು ಹಿಡಿದಿದ್ದಾರೆ.
ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಹತ್ಯೆಗೆ ಬಿಗ್ ಟ್ವಿಸ್ಟ್ – ಸಿದ್ಧಾರ್ಥ್ ಮಲತಾಯಿ ಅರೆಸ್ಟ್
ಈ ಹಿನ್ನೆಲೆಯಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ ನೇತೃತ್ವದ ಸರ್ಕಾರದ ನಿಯೋಗ ಸ್ವಾಮೀಜಿ ಭೇಟಿಯಾಗಿದ್ದು, ಮನವೊಲಿಕೆ ಯತ್ನ ನಡೆಸಿದ್ದಾರೆ.