ಉಡುಪಿ; ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ, ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ನೀಡಲಿ ಎಂದು ಹೆಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮೀಸಲಾತಿಗಾಗಿ ದಿನವೂ ಹೋರಾಟಗಳು ನಡೆಯುತ್ತಿವೆ. ಈ ಬಗ್ಗೆ ರಾಜ್ಯ ಸರ್ಕಾರ ಸಂವಿಧಾನಾತ್ಮಕವಾಗಿ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಿ ಎಂದರು.
ಇದೇ ವೇಳೆ ಐಎಂಎ ವಂಚಕ ಮನ್ಸೂರ್ ಅಲಿಖಾನ್ 5 ಕೋಟಿ ರೂಪಾಯಿ ಹಣ ಸಂದಾಯ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನನಗೂ ಅಲಿಖಾನ್ ಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವನು ಯಾರಿಗೆ ಹಣ ಕೊಟ್ಟಿದ್ದಾನೆ ಅವರಿಂದ ವಸೂಲಿ ಮಾಡಲಿ. ನಾನು ಯಾರಿಂದಲೂ ಐದು ಪೈಸೆ ಹಣ ಪಡೆದುಕೊಂಡಿಲ್ಲ. ನನಗೆ ಆತನಿಂದ ಹಣ ಪಡೆಯುವ ಅಗತ್ಯವಿಲ್ಲ ಎಂದರು.