ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇದು ಜಿಲ್ಲಾಡಳಿತಗಳ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲಾಡಳಿತಗಳ ಜೊತೆ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 12ರವರೆಗೆ ಕಠಿಣ ನಿಬಂಧನೆಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸರು ಯಾವುದೇ ಮುಲಾಜಿಲ್ಲದೇ, ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸೂಚಿಸಿದರು.
ಉದ್ಯೋಗಿಗಳನ್ನು ಉಳಿಸಲು ಆದೇಶ ಹೊರಡಿಸಿದರೆ ಸಾಲದು ಅಗತ್ಯ ಕ್ರಮ ಕೈಗೊಳ್ಳಬೇಕು: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಜನರಿಗೆ ತೊಂದರೆಯಾಗದಂತೆ ಅಗತ್ಯ ವಸ್ತುಗಳ ಖರೀದಿಗೆಂದು ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ. 10 ಗಂಟೆಯ ಬಳಿಕ ಯಾರೂ ಮನೆಯಿಂದ ಹೊರಬರುವಂತಿಲ್ಲ. ಅಗತ್ಯ ವಸ್ತುಗಳ ಖರೀದಿ ವೇಳೆಯೂ ಮಾಸ್ಕ್, ದೈಹಿಕ ಅಂತರ ಕಡ್ಡಾಯ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. 14 ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಬೇಕು ಎಂದು ತಿಳಿಸಿದ್ದಾರೆ.