ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಚಾಮುಂಡಿ ತಾಯಿ ಮೊದಲ ದರ್ಶನ ಪಡೆದಿದ್ದೇನೆ ಎಂದರು. ಮೇಕೆದಾಟು, ಕಾವೇರಿ ನದಿ ನೀರು ವಿಚಾರವಾಗಿ ತಮಿಳುನಾಡು ಮೊದಲಿನಿಂದಲೂ ರಾಜಕಾರಣ ಮಾಡುತ್ತಿದೆ. ಮೇಕೆದಾಟು ನಮ್ಮ ಹಕ್ಕು. ಈ ಬಗ್ಗೆ ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮತ್ತೊಮ್ಮೆ ಚರ್ಚೆ ನಡೆಸಿ ಮನವರಿಕೆ ಮಾಡುತ್ತೇನೆ. ನಮ್ಮ ನೀರಿನ ಹಕ್ಕನ್ನು ಪಡೆದುಕೊಳ್ಳುತ್ತೇನೆ ಎಂದರು.
ಮುಂದಿನ ಒಲಂಪಿಕ್ಸ್ ನಲ್ಲಿ ಈ ಸ್ಪರ್ಧೆಗಳು ಇರುವುದು ʼಡೌಟ್ʼ
ಇನ್ನು ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಎಲ್ಲಾ ಗಡಿ ಜಿಲ್ಲೆಗಳಿಗೂ ವಾರದೊಳಗಾಗಿ ಖುದ್ದು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.