ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಇದರ ನಡುವೆ ದೇಶದಲ್ಲಿ ಕೋವಿಡ್ ಲಸಿಕೆ ಅಭಾವ ಆರಂಭವಾಗಿದ್ದು, ಪ್ರಮುಖವಾಗಿ ರಾಜ್ಯದಲ್ಲಿ ಮೇ 1ರಿಂದ ಲಸಿಕೆ ಸಿಗುವುದು ಅನುಮಾನ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಮೇ 1 ರಿಂದ ಕೊರೊನಾ ಲಸಿಕೆ ಘೋಷಣೆ ಬೆನ್ನಲ್ಲೇ ರಾಜ್ಯ ಸರ್ಕಾರ 18ರಿಂದ 45 ವರ್ಷದವರೆಗಿನ ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡುವುದಾಗಿ ಹೇಳಿತ್ತು. ಈ ನಡುವೆ ಲಸಿಕೆ ಅಭಾವ ಎದುರಾಗಿದೆ ಎಂಬ ಮಾತು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾಹಿತಿ ಪಡೆದಿದ್ದು, ಲಸಿಕೆ ಅಭಾವ ಇರುವ ಬಗ್ಗೆ ರವಿಕುಮಾರ್ ಸ್ಪಷ್ಟ ಪಡಿಸಿದ್ದಾರೆ ಎನ್ನಲಾಗಿದೆ.
ಹೋಮ್ ಐಸೋಲೇಷನ್ನಲ್ಲಿರುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 1ರಿಂದ ಕೊರೊನಾ ಲಸಿಕೆ ಸಿಗುವುದು ಅನುಮಾನ. ರಾಜ್ಯ ಸರ್ಕಾರ 1 ಕೋಟಿ ಕೋವಿಡ್ ಲಸಿಕೆಗೆ ಆರ್ಡರ್ ನೀಡಿದೆ. ಆದರೆ ಸರ್ಕಾರ ಕೊಟ್ಟ ಆರ್ಡರ್ ಮೇ 1ರೊಳಗೆ ಸಿಗುವುದು ಸಾಧ್ಯವಿಲ್ಲ. ಹಾಗಾಗಿ ಈಗಿರುವ ಪರಿಸ್ಥಿತಿ ಗಮನಿಸಿದರೆ ಮೇ 1ರಿಂದ ಲಸಿಕೆ ಅಭಿಯಾನ ಆರಂಭಿಸುವುದು ಅನುಮಾನ. ರಾಜ್ಯಕ್ಕೆ ಲಸಿಕೆ ಲಭ್ಯವಾದ ಕೂಡಲೇ ಅಭಿಯಾನ ಆರಂಭಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.