ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮತ್ತೊಂದು ಪತ್ರ ಬರೆದು ದೂರು ನೀಡಿದ್ದಾಗಿ ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಸಂತ್ರಸ್ತೆ ಪರ ವಕೀಲರಾದ ಜಗದೀಶ್ ಹಾಗೂ ಸೂರ್ಯಮುಕುಂದ ರಾಜ್ ಅವರಿಗೆ ಹಣದ ಆಮಿಷವೊಡ್ಡಿ ಒತ್ತಡ ಹೇರುತ್ತಿದ್ದಾರೆ. ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದಾರೆ. ಕೂಡಲೇ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಡ್ ಬ್ಲಾಕಿಂಗ್ ದಂಧೆ ಬಯಲು; ಇದು ಪಾಲು ಹಂಚಿಕೆ ಜಗಳದಿಂದ ಸಿಡಿದ ಕಿಡಿ; ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ ಸ್ನೇಹಿತ ಪ್ರಭು ಪಾಟೀಲ್ ಎಂದು ಹೇಳಿಕೊಂಡು ವಕೀಲರಿಗೆ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣದ ಆಮಿಷವೊಡ್ಡುತ್ತಿದ್ದಾರೆ ಆರೋಪಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.