ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿಯಲ್ಲಿರುವ ಯುವತಿ ನೀಡುವ ಹೇಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ.
ಎಸ್ ಐ ಟಿ ವಿಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಸಿಡಿ ಲೇಡಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ತಾನು ನಿರಪರಾಧಿ ಎಂದು ಯುವತಿ ಪೋಷಕರೇ ಹೇಳಿದ್ದಾರೆ ಎಂದಿರುವ ರಮೇಶ್ ಜಾರಕಿಹೊಳಿ ಇಂದು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಲಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಇನ್ನೂ ಕೂಡ ಸಂಕಷ್ಟದಿಂದ ತಪ್ಪಿಸಿಕೊಂಡಿಲ್ಲ. ಕಾರಣ ಪೋಷಕರ ಹೇಳಿಕೆ ಬಳಿಕ ವಿಡಿಯೋ ಬಿಡುಗಡೆ ಮಾಡಿದ್ದ ಯುವತಿ ತನ್ನ ತಂದೆ-ತಾಯಿ ಮೇಲೆ ಪ್ರಭಾವ ಬೀರಿ ಬ್ಲ್ಯಾಕ್ ಮೇಲ್ ಮಾಡಿ ಏನೇನೋ ಹೇಳಿಕೆ ಕೊಡಿಸುತ್ತಿದ್ದಾರೆ. ಏನು ನಡೆದಿದೆ ಎಂಬುದೇ ಅವರಿಗೆ ಗೊತ್ತಿಲ್ಲ. ಪ್ರಕರಣದ ಬಗ್ಗೆ ಏಕಾಏಕಿ ಪ್ಲೇಟ್ ಚೇಂಜ್ ಮಾಡುತ್ತಿದ್ದಾರೆ. ಅನ್ಯಾಯವಾಗಿರುವುದು ನನಗೆ ನಾನೇ ನ್ಯಾಯಾಧೀಶರ ಮುಂದೆ ಬಂದು ಇಂಚಿಂಚೂ ಮಾಹಿತಿ ನೀಡುವುದಾಗಿ ಹೇಳಿದ್ದಳು.
ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡುವ ಜೊತೆಗೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಂದು ಬಾಂಬ್
ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣ ಸಿಡಿ ಲೇಡಿ ನೀಡುವ ಹೇಳಿಕೆಯ ಬಳಿಕ ಮಹತ್ವದ ಟ್ವಿಸ್ಟ್ ಪಡೆದುಕೊಳ್ಳಲಿದೆ. ಸಿಡಿ ಲೇಡಿ ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.