ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ರೈತರ ರಣಕಹಳೆ ಮೊಳಗಲಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರುದ್ಧ ಪ್ರತಿಭಟನೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಬೆಂಗಳೂರಿಗೆ ಆಗಮಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ, ಧರಣಿ, ಬಾರುಕೋಲು ಚಳುವಳಿಗಳನ್ನು ನಡೆಸುವ ಮೂಲಕ ನೂತನ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಅನ್ನದಾತರು ಮತ್ತೆ ಪ್ರತಿಭಟನೆ ಆರಂಭಿಸುತ್ತಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕಾಲ್ನಡಿಗೆ ಜಾಥಾದ ಮೂಲಕ ರೈತರು ರಾಜಭವನ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಜಾಥಾ ಕೂಡ ಆರಂಭವಾಗಲಿದ್ದು, ಸಿಟಿ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಜಾಥ ನಡೆಸಲಿದ್ದಾರೆ. ಹೀಗಾಗಿ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹೆಚ್ಚಿದೆ.