ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಯಲ್ಲಿರುವ ಜನತಾ ಕರ್ಫ್ಯೂ ನಾವು ಅಂದುಕೊಂಡಷ್ಟು ಪರಿಣಾಮಕಾರಿಯಾಗಿಲ್ಲ. ಈಗಿರುವ ಲಾಕ್ ಡೌನ್ ವಿಫಲವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈಗಿರುವ ಜನತಾ ಕರ್ಫ್ಯೂ ಮೇ 12ಕ್ಕೆ ಮುಗಿಯಲಿದೆ. ಬಳಿಕ ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ ಕರ್ಫ್ಯೂ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕಾರಣ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಓಡಾಟ ರಾಜಾರೋಷವಾಗಿ ನಡೆಯುತ್ತಿದೆ. ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಹಾಗಾಗಿ ಕಟ್ಟು ನಿಟ್ಟಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳುವ ಮೂಲಕ ರಾಜ್ಯಾದ್ಯಂತ ಲಾಕ್ ಡೌನ್ ಜಾರಿ ಬಗ್ಗೆ ಸುಳಿವು ನೀಡಿದರು.
ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಜನ ಮೆಚ್ಚುವ ಕಾರ್ಯ ಮಾಡಿದೆ ಈ ಪಂಚಾಯಿತಿ
ಇನ್ನು ಮೇ 15ರ ಬಳಿಕ ನಮಗೆ ಲಸಿಕೆ ಬರಲಿದೆ ಹಾಗಾಗಿ 15ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು. ಇದೇ ವೇಳೆ ಕೊರೊನಾ ನಿಯಂತ್ರಣಕ್ಕಾಗಿ ಹಿರಿಯ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿರುವುದು ನನಗೆ ಆನೆ ಬಲ ಬಂದಂತಾಗಿದೆ ಎಂದು ಹೆಳಿದರು.
ಒಟ್ಟಾರೆ ರಾಜ್ಯದಲ್ಲಿ ಜನತಾ ಕರ್ಫ್ಯೂ ಸಂಪೂರ್ಣ ವಿಫಲವಾಗಿದ್ದು, ಕೊರೊನಾ ಕಟ್ಟಿಹಾಕಲು ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಬೇಕು ಎಂಬ ಒತ್ತಡಗಳು ಸರ್ಕಾರದ ಮೇಲೆ ಹೆಚ್ಚುತ್ತಿವೆ.