ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಜಿಲ್ಲೆ ಸ್ಥಾಪನೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಗೋಕಾಕ್ ನ್ನು ಜಿಲ್ಲೆಯನ್ನಾಗಿಸುವ ಪ್ರಯತ್ನ ಆರಂಭವಾಗಿದೆ ಎಂದು ತಿಳಿದುಬಂದಿದೆ.
ಸಚಿವ ರಮೇಶ್ ಜಾರಕಿಹೊಳಿಯವರೇ ಗೋಕಾಕ್ ನಲ್ಲಿ ಈ ವಿಷಯ ತಿಳಿಸಿದ್ದು, ಗೋಕಾಕ್ ನ್ನು ಜಿಲ್ಲೆಯನ್ನಾಗಿ ಮಾಡುವ ಕುರಿತು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿಗಳು ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ಬಜೆಟ್ ಮಂಡನೆ ಬಳಿಕ ನಿಯೋಗ ತೆರಳಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗೋಣಾ ಎಂದಿದ್ದಾರೆ.
ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಆನಂದ್ ಸಿಂಗ್ ಅವರ ಪ್ರಮುಖ ಬೇಡಿಕೆಯಂತೆ ವಿಜಯನಗರವನ್ನು ಜಿಲ್ಲೆಯನ್ನಾಗಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೀಗ ಬಿಜೆಪಿ ಸರ್ಕಾರ ರಚನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿಯವರ ಬೇಡಿಕೆಗೆ ಸ್ಪಂದಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.