alex Certify BIG NEWS: ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿ ಲಾಕ್ ಡೌನ್ ಅನಿವಾರ್ಯಎಂದ ಕೇಂದ್ರ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿ ಲಾಕ್ ಡೌನ್ ಅನಿವಾರ್ಯಎಂದ ಕೇಂದ್ರ ಸಚಿವ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಜನತಾ ಕರ್ಫ್ಯೂ ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ಒತ್ತಾಯಗಳು ಹೆಚ್ಚುತ್ತಿವೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೂಡ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಕುರಿತು ಗಂಭೀರವಾಗಿ ಸರ್ಕಾರ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಲಾಕ್ ಡೌನ್ ನಿಂದ ಕೊರೊನಾ ಕಟ್ಟಿಹಾಕಲಾಗದು, ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಈಗ ಸೋಂಕು ಹರಡುತ್ತಿದೆ. ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯ ಲಾಕ್ ಡೌನ್ ಜಾರಿಗೆ ತರಬೇಕು. ಇದರಿಂದ ಸೋಂಕಿತರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬರಲಿದೆ ಎಂದರು.

ಸುಪ್ರೀಂಕೋರ್ಟ್ ಕೂಡ ಸೋಂಕಿತರ ಸಂಖ್ಯೆ ಹೆಚ್ಚಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮಾದರಿ ಲಾಕ್ ಡೌನ್ ಮಾಡಲು ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...