ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ನಡುವೆಯೇ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿದ್ದು, 1,100 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ, ರಾಜ್ಯದಲ್ಲಿ 1,100 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ. ಸೋಂಕಿತರಿಗೆ ಆಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೂ ಔಷಧ ವ್ಯವಸ್ಥೆ ಮಾಡಲಾಗಿದೆ ಎಂದರು.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿದೆ, ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿ ಪ್ರಕ್ರಿಯೆ ಕೂಡ ನಡೆದಿದೆ. ಇನ್ನು ಅನ್ ಲಾಕ್ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಲಾಕ್ ಡೌನ್ ಬಳಿಕ ಕೋವಿಡ್ ಸಂಖ್ಯೆ ಇಳಿಮುಖವಾಗಿದೆ. ಹಾಗಾಗಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಪರಿಸ್ಥಿತಿ ನೋಡಿ ನಿರ್ಧರಿಸಲಾಗುವುದು ಎಂದು ಹೇಳಿದರು.