ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಆತಂಕ ವಕ್ತಪಡಿಸಿದ್ದಾರೆ.
ಕಿಮ್ಸ್, ಎಂ.ಎಸ್.ರಾಮಯ್ಯ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು 5-6 ಪಟ್ಟು ಹೆಚ್ಚಾಗಿದೆ. ಸಾವಿನ ಸಂಖ್ಯೆಯೂ ಕೈಮೀರಿ ಹೋಗುತ್ತಿದೆ. ಇಂತಹ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ಬೆಡ್ ನೀಡುವ ಮೂಲಕ ಸಹಾಯ ಮಾಡಬೇಕು ಎಂದರು.
ಲಸಿಕೆ ಅಭಾವವಿದ್ದರೂ ಅಭಿಯಾನ ಆರಂಭಿಸಿದ ಸರ್ಕಾರ: ನಡೆಸಿರುವ ಸಿದ್ಧತೆಯಾದರೂ ಏನು….? ಸಿದ್ದರಾಮಯ್ಯ ಪ್ರಶ್ನೆ
ರಾಮಯ್ಯ ಆಸ್ಪತ್ರೆಯ ಆಡಳಿತ ಮಂಡಳಿ ಜೊತೆ ಚರ್ಚಿಸಿದ್ದು, 450 ಐಸಿಯು, ಆಕ್ಸಿಜನೇಟೆಡ್ ಬೆಡ್ ಸೇರಿದಂತೆ ಸೋಂಕಿತರಿಗೆ 850 ಬೆಡ್ ಮೀಸಲಿಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.