alex Certify BIG NEWS: ರೆಮ್‌ಡಿಸಿವಿರ್‌ ಔಷಧ ಅಭಾವ; ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೆಮ್‌ಡಿಸಿವಿರ್‌ ಔಷಧ ಅಭಾವ; ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೆಮ್‌ಡಿಸಿವಿರ್‌ ಔಷಧ ಕಾಳಸಂತೆಯಲ್ಲಿ ಮಾಟವಾಗುತ್ತಿದೆ ಎಂಬ ವರದಿಗಳು ಬರುತ್ತಿದ್ದರೂ ಎಚ್ಚೆತ್ತು ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ಇಷ್ಟ ಬಂದಂತೆ ಔಷಧಿ ರಫ್ತು ಮಾಡಿದೆ. ಈಗ ಔಷಧ ಅಭಾವ ಆರಂಭವಾಗುತ್ತಲೇ ನಿಷೇಧ ಹೇರಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ನಕಲಿ ಔಷಧ ಪೂರೈಕೆಯಾಗುತ್ತಿವೆ ಎಂಬ ವರದಿ ಬರುತ್ತಿದೆ. ಇನ್ನೊಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿದೆ. ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಟಿಎಂ ಕೇಂದ್ರದಲ್ಲೇ ಸೆಕ್ಯುರಿಟಿ ಗಾರ್ಡ್ ಕಲಿಕೆ: ಹರಿದುಬಂತು ಮೆಚ್ಚುಗೆಯ ಮಹಾಪೂರ

ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...