ಮೈಸೂರು: ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಹೊಸ ವಿವಾದವನ್ನು ಸೃಷ್ಟಿಸಿದೆ.
ಈ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಲವ್ ಜಿಹಾದ್ ಗಿಂತಲೂ ಮುಖ್ಯವಾದ ಹಲವು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ ಎಂದು ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಕ್ರಾಸ್ ಬ್ರೀಡ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಷಯ ಎಂದು ತಿಳಿಸಿದರು.