alex Certify BIG NEWS: ವಿತ್ತೀಯ ಕೊರತೆ ನೀಗಿಸಲು ಜನರ ಶೋಷಣೆಗೆ ಮುಂದಾಗುವುದು ಸರ್ಕಾರದ ತಂತ್ರ – ಕೇಂದ್ರ ಬಜೆಟ್ ಬಗ್ಗೆ ಕುಮಾರಸ್ವಾಮಿ ಕೆಂಡಾಮಂಡಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿತ್ತೀಯ ಕೊರತೆ ನೀಗಿಸಲು ಜನರ ಶೋಷಣೆಗೆ ಮುಂದಾಗುವುದು ಸರ್ಕಾರದ ತಂತ್ರ – ಕೇಂದ್ರ ಬಜೆಟ್ ಬಗ್ಗೆ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಬೆಲೆ ಏರಿಕೆಗಳನ್ನು ಸಮರ್ಥಿಸಿಕೊಂಡು ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ.

ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ, 2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ..? ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಬಜೆಟ್​ 2021: ರೈಲ್ವೆ ಇಲಾಖೆಗೆ ಬರೋಬ್ಬರಿ 1.10 ಲಕ್ಷ ಕೋಟಿ ರೂ. ಮೀಸಲು

ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ 12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ…? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ..? ಈ ಸಾಲದಿಂದ ಆಗಬಹುದಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ ಹೇಳುತ್ತದೆಯೇ..? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಲಸಿಕೆಗಾಗಿ 35 ಸಾವಿರ ಕೋಟಿ ನೀಡುವುದಾಗಿ, ಅಗತ್ಯವಿದ್ದರೆ ಇನ್ನಷ್ಟು ನೀಡುವುದಾಗಿಯೂ ಕೇಂದ್ರ ಹೇಳಿದೆ. ಇತರ ದೇಶಗಳಿಗೆ ಲಸಿಕೆ ಕಳುಹಿಸುತ್ತಿರುವುದಾಗಿಯೂ ಹೇಳಿದೆ. ಈ ಎಲ್ಲ ಬಣ್ಣನೆಗಳನ್ನು ಬಿಟ್ಟು ಕೇಂದ್ರ ಸರ್ಕಾರ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ಖಚಿತ ಮಾಡಬೇಕಿತ್ತು. ಅದರ ಬದಲು ಸರ್ಕಾರ ಬಣ್ಣನೆಯಲ್ಲಿ ಮಾತು ಮುಗಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...