ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಸರ್ಕಾರ ಇಂದು ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಪಂಚಮಸಾಲಿ ಮುಖಂಡರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸುತ್ತಿದ್ದು, ಸಮಾವೇಶ ಮುಗಿಯುವುದರೊಳಗೆ ಮೀಸಲಾತಿಗೆ ಸರ್ಕಾರ ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನಿಡಿದ್ದಾರೆ. ಇದರ ಬೆನ್ನಲ್ಲೇ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೇ ಸಿಎಂ ಅಧಿಕೃತ ನಿವಾಸ ಕಾವೇರಿ ಸುತ್ತಲು ಕೂಡ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.