alex Certify BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೆಸರು ಫೈನಲ್ – ಸಿಎಂ ಭೇಟಿಯಾದ ಹೊರಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೆಸರು ಫೈನಲ್ – ಸಿಎಂ ಭೇಟಿಯಾದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಕೇಳಿದ್ದೆವು. ಈ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿರುವುದಾಗಿ ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನದ ವಿಚಾರವಾಗಿ ಎಂಎಲ್ ಸಿಗಳ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ. ದೇವೇಗೌಡರು ಹಾಗೂ ಜೆ.ಪಿ.ನಡ್ಡಾ ಜತೆಯೂ ಚರ್ಚಿಸಿ ತೀರ್ಮಾನಿಸುತ್ತಾರೆ. ನಾವು ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ. ಸಿಎಂ ಬಿ ಎಸ್ ವೈ ಏನು ತೀರ್ಮಾನ ಮಾಡುತ್ತಾರೆ ಎಂಬುದನ್ನು ನೋಡಬೇಕು. ಬಿಜೆಪಿ ಬೆಂಬಲಿಸದಿದ್ದರೆ ಏನು ಮಾಡಬೇಕೆಂದು ನಿರ್ಧರಿಸಿಲ್ಲ ಎಂದಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮವಾಗಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೂಚನೆ ಮೇರೆಗೆ ಹೊರಟ್ಟಿ ಇಂದು ಸಿಎಂ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...