alex Certify BIG NEWS: ಶಾಲೆಗಳಿಗೆ ನೀಡಲಾಗಿದ್ದ ಅಕ್ಟೋಬರ್ ರಜೆ ರದ್ದುಪಡಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳಿಗೆ ನೀಡಲಾಗಿದ್ದ ಅಕ್ಟೋಬರ್ ರಜೆ ರದ್ದುಪಡಿಸಿದ ಸರ್ಕಾರ

2020 – 21 ನೇ ಸಾಲಿನ ಶೈಕ್ಷಣಿಕ ಅವಧಿ ಮತ್ತು ಮಧ್ಯಂತರ ರಜೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಅಕ್ಟೋಬರ್ 3 ರಿಂದ 26ರವರೆಗೆ ನೀಡಲಾಗುತ್ತಿದ್ದ ಮಧ್ಯಂತರ ರಜೆಯನ್ನು ರದ್ದು ಪಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಫೆಬ್ರವರಿ 14ರಂದು ಹೊರಡಿಸಲಾಗಿದ್ದ ಆದೇಶವನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಅನ್ಲಾಕ್ 5 ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರಿಂದ ಶಾಲೆಗಳನ್ನು ಆರಂಭಿಸಬಹುದು ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ರಜೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳ ಆರಂಭಕ್ಕೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...