alex Certify BIG NEWS: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪಾಸ್ ಮಾಡಲು ನಿರ್ಧರಿಸಿದೆ. ಇದರ ಬೆನ್ನಲ್ಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ.

ಪ್ರಾಥಮಿಕ ಶಾಲೆಗಳಿಗೆ ಅಂದರೆ 1-7ನೇ ತರಗತಿವರೆಗಿನ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಜೂನ್ 15ರಿಂದ ಶೈಕ್ಷಣಿಕ ಅವಧಿ ಆರಂಭವಾಗಲಿದೆ.

ಕೊರೊನಾ ಹೆಚ್ಚಳಕ್ಕೆ ಜನರು ಕಾರಣ; ಅಲ್ಲಿಯವರೆಗೆ ನೀವೇನು ಮಾಡುತ್ತಿದ್ದೀರಿ: ಸರ್ಕಾರದ ವಿರುದ್ಧ ಹೆಚ್. ವಿಶ್ವನಾಥ್ ವಾಗ್ದಾಳಿ

ಪ್ರೌಢ ಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿ ಹೊಂದಿರುವ ಶಾಲೆಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಪ್ರೌಢ ಶಾಲಾ ಶಿಕ್ಷಕರಿಗೆ 15/6/2021ರಿಂದ 14/7/2021ರವರೆಗೆ ರಜೆ ಇರಲಿದೆ.

21/6/2021ರಿಂದ 5/7/2021ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...