ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಷ್ಟಾಚಾರ ಉಲ್ಲಂಘನೆ ಮಾಡಿ ಎಂಟಿಬಿ ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ಆರೋಪಿಸಿ ಹೊಸಕೋಟೆ ನಗರದಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.
ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕರ್ನಾಟಕ – ಠಾಕ್ರೆ ಇತಿಹಾಸ ತಿಳಿದುಕೊಳ್ಳಲಿ ಎಂದ ಡಿಸಿಎಂ ಕಾರಜೋಳ
ಪೊಲೀಸರ ಕ್ರಮ ಖಂಡಿಸಿ ಶರತ್ ಬಚ್ಚೇಗೌಡ ಹಾಗೂ ಬೆಂಬಲಿಗರು ಹೆದ್ದಾರಿ ತಡೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಹೆದ್ದಾರಿ ತಡೆ ನಡೆಸಿದ ಕಾರಣಕ್ಕೆ ಇದೀಗ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.