ಚಿತ್ರದುರ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಖಂಡಿಸಿ ಕಾಂಗ್ರೆಸ್ ನಾಯಕರು ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ನವರು ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ. ಬಜೆಟ್ ಸೇರಿದಂತೆ ಯಾವುದೇ ಚರ್ಚೆಗೆ ಬಾರದೇ ಓಡುತ್ತಿದ್ದಾರೆ. ಈಗ ಭದ್ರಾವತಿಯಲ್ಲೀ ಹೋರಾಟ ಮಾಡಲು ಹೊರಟಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಬಿಜೆಪಿ ಭದ್ರಕೋಟೆ ಸಿಎಂ ಯಡಿಯೂರಪ್ಪ ತವರಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಶಿವಮೊಗ್ಗಕ್ಕೆ ನಾಯಕರ ದಂಡು
ಕಾಂಗ್ರೆಸ್ ನಾಯಕರು ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಇನ್ನು ಗಲಾಟೆ ಪ್ರಕರಣದಲ್ಲಿ ಸಂಗಮೇಶ್ ಪುತ್ರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇನ್ನು ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಶ್ರೀರಾಮುಲು, ಮಹಾನ್ ನಾಯಕ ಯಾರೆಂದು ನನಗೆ ಗೊತ್ತಿಲ್ಲ. ಆದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ ಎಂದು ಹೇಳಿದರು.