ಮಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬರೆದಿರುವುದು ಪತ್ರವಲ್ಲ. ರಾಜ್ಯದಲ್ಲಿ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದನ್ನು ಬಿಚ್ಚಿಟ್ಟಿದ್ದಾರೆ.
ಹಿರಿಯ ಸಚಿವರೊಬ್ಬರು ತಮಗೆ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿಲ್ಲ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಿನಿಸ್ಟರ್ ಒಬ್ಬರಿಗೆ ಸಿಎಂ ಮೇಲೆ ವಿಶ್ವಾಸವಿಲ್ಲ. ಸರ್ಕಾರದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ದೂರಿನ ಮೂಲಕ ಈಶ್ವರಪ್ಪ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ತಮ್ಮ ಆಡಳಿತ ಸರಿಯಿದೆ ಎನ್ನುವುದಾದರೆ ಸಂಜೆಯೊಳಗೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡಲಿ. ಇಲ್ಲವೇ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೋವಿಡ್ ಮಾರ್ಗಸೂಚಿಯಲ್ಲಿ ಬದಲಾವಣೆ ಸಾಧ್ಯವಿಲ್ಲ – ಎಲ್ಲ ರಂಗದವರ ಬಗ್ಗೆಯೂ ಗೌರವವಿದೆ ಎಂದ ಸಚಿವ ಸುಧಾಕರ್
ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೊರೊನಾ ಗೈಡ್ ಲೈನ್ ಅಟ್ಟರ್ ಪ್ಲಾಪ್. ಮನೆಯಲ್ಲಿ ಪತಿ, ಪತ್ನಿ ಒಟ್ಟಿಗೆ ಇರಬಹುದು ಆದರೆ ಥಿಯೇಟರ್ ಗೆ ಹೋದರೆ ದೂರ ಕುಳಿತುಕೊಳ್ಳಬೇಕು ಎಂಬುದು ಹಾಸ್ಯಾಸ್ಪದವಾಗಿದೆ. ಕೊರೊನಾ ವಿಚಾರದಲ್ಲಿ ಚುನಾವಣೆ ಸೇರಿದಂತೆ ಎಲ್ಲದಕ್ಕೂ ಅನ್ವಯವಾಗುವಂತೆ ಒಂದೇ ನಿಯಮ ಜಾರಿಗೆ ತರಲಿ ಎಂದರು.