ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ಕ್ರಾಸ್ ಬ್ರೀಡ್, ಸಿದ್ದರಾಮಯ್ಯ ಆ ಪಕ್ಷ ಸೇರಿರುವುದರಿಂದ ಅವರ ಮೇಲೂ ಅನುಮಾನವಿದೆ ಎಂದು ಟೀಕಿಸಿದ್ದಾರೆ.